ಮಂಡ್ಯ : ಪಾರಂಪರಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಇಂದು ಚಾಲನೆ ದೊರೆಯಲಿದೆ. ನಟ ಹಾಗೂ ನಿಎದೇಶಕ ವಿ. ರವಿಚಂದ್ರನ್ ದಸರಾ ಮಹೋತ್ವವನ್ನು ಉದ್ಘಾಟಿಸಲಿದ್ದು, ಮುಂದಿನ ನಾಲ್ಕು ದಿನಗಳ ಕಾಲ ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ ಮನೆ ಮಾಡಲಿದೆ.
ಮಧ್ಯಾಹ್ನ 3ರಿಂದ 3:45ರ ನಡುವಿನ ಶುಭ ಕುಂಭ ಲಗ್ನದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಶ್ರೀರಂಗಪಟ್ಟಣದ ಕಿರಂಗೂರು ಬಳಿಯ ಬನ್ನಿಮಂಟಪದಲ್ಲಿ ಪೂಜಾ ಕೈಂಕರ್ಯಗಳು ನಡೆಯಲಿದ್ದು, ಬನ್ನಿ ಪೂಜೆಯ ಮೂಲಕ ದಸರಾ ಉತ್ಸವಕ್ಕೆ ಅಧಿಕೃತ ಚಾಲನೆ ದೊರೆಯಲಿದೆ.
ಅಂಬಾರಿ ಹೊತ್ತು ಸಾಗಲಿರುವ ಮಹೇಂದ್ರ ಆನೆ:
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಗೆ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಗುತ್ತದೆ. ಬಳಿಕ ಅಂಬಾರಿ ಹೊತ್ತ ಮಹೇಂದ್ರ ಆನೆ ಹೆಜ್ಜೆ ಹಾಕಲಿದ್ದು, ಶ್ರೀರಂಗಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಂಬೂಸವಾರಿ ಮೆರವಣಿಗೆ ಸಾಗಲಿದೆ.





