ಬೆಂಗಳೂರು: ದಸರಾ ಹಬ್ಬದ ಹಿನ್ನೆಲೆ ತಮ್ಮ ಊರುಗಳಿಗೆ ತೆರಳಲು ಮುಂದಾಗಿದ್ದ ಪ್ರಯಾಣಿಕರು, ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಉಂಟಾದ ಭಾರೀ ಟ್ರಾಫಿಕ್ ಜಾಮ್ನಿಂದಾಗಿ ತೀವ್ರ ಪರದಾಟ ಅನುಭವಿಸಿದರು.
ನಗರದ ಪ್ರಮುಖ ರಸ್ತೆಗಳಲ್ಲಿ ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಪ್ರಯಾಣಿಕರು ಸುಮಾರು 6 ಗಂಟೆಗಳ ಕಾಲ ಟ್ರಾಫಿಕ್ನಲ್ಲೇ ಸಿಲುಕಿಕೊಂಡರು.
ಮೈಸೂರು ರಸ್ತೆ, ತುಮಕೂರು ರಸ್ತೆ ಹಾಗೂ ಏರ್ಪೋರ್ಟ್ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ದಸರಾ ಹಬ್ಬಕ್ಕಾಗಿ ಊರಿಗೆ ತೆರಳುತ್ತಿದ್ದ ಖಾಸಗಿ ಬಸ್ಗಳು ಕೂಡ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿದ್ದರಿಂದ, ಕೆಲವು ಬಸ್ಗಳು ಬೆಳಗಿನ ಜಾವ 3ರಿಂದ 4 ಗಂಟೆಯ ವೇಳೆಗೆ ಮಾತ್ರ ಬೆಂಗಳೂರು ನಗರದಿಂದ ಹೊರಬರಲು ಸಾಧ್ಯವಾಯಿತು.







