ಮೈಸೂರು : ಇಂದು ನಸುಕಿನ ಜಾವ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೀರನಹಳ್ಳಿ ಗೇಟ್ನಲ್ಲಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ.
ಸ್ಲೀಪರ್ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತಕ್ಕೀಡಾದ ಬಸ್ ಮೈಸೂರಿನಿಂದ ಮಡಿಕೇರಿ ಕಡೆಗೆ ಹೊರಟಿತ್ತು, ಲಾರಿ ಮಡಿಕೇರಿ ಭಾಗದಿಂದ ಮೈಸೂರು ಕಡೆಗೆ ಬರುತ್ತಿತ್ತು. ಕೀರನಹಳ್ಳಿ ಗೇಟ್ ಬಳಿ ಅಪಘಾತಕ್ಕೀಡಾಗಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸುತ್ತಿದ್ದಾರೆ.
ಇದನ್ನೂ ಓದಿ : ಕೆನಡಾಕ್ಕೆ ಮೋದಿ ಪ್ರಯಾಣ : ದ್ವೀಪಕ್ಷೀಯ ಸಂಬಂಧ ಬಲವರ್ಧನೆಗೆ ಮಹತ್ವದ ಹೆಜ್ಜೆ





