ನವದೆಹಲಿ: ನಿಮ್ಮ ಹೆಸರಿನಲ್ಲಿ ಪಡೆದಿರುವ ಸಿಮ್ ಕಾರ್ಡ್ ಅನ್ನು ಬೇರೆಯವರಿಗೆ ಬಳಸಲು ನೀಡಿದ್ದೀರಾ? ಹಾಗಿದ್ದರೆ ಎಚ್ಚರ. ನಿಮ್ಮ ಹೆಸರಿನಲ್ಲಿರುವ ಸಿಮ್ ಕಾರ್ಡನ್ನ ಬೇರೆಯವರು ಬಳಸಲು ಅವಕಾಶ ನೀಡದಂತೆ ದೂರಸಂಪರ್ಕ ಇಲಾಖೆ ಎಚ್ಚರಿಕೆ ನೀಡಿದೆ.
ನಿಮ್ಮ ಹೆಸರಿನಲ್ಲಿ ನೋಂದಣಿಯಾಗಿರುವ SIM ಕಾರ್ಡ್ ಅನ್ನು ಮತ್ತೊಬ್ಬರು ದುರ್ಬಳಕೆ ಮಾಡಿದರೆ, ಟೆಲಿಕಾಂ ಗುರುತಿನ ಸಂಖ್ಯೆಗಳ ದುರುಪಯೋಗ, ಐಎಂಇಐ ಸಂಖ್ಯೆಗಳಲ್ಲಿ ಬದಲಾವಣೆ (ಟ್ಯಾಂಪರಿಂಗ್) ಮಾಡಿದ್ರೆ ಗಂಭೀರ ಕಾನೂನು ಪರಿಣಾಮಗಳಿಗೆ ಕಾರಣವಾಗಬಹುದು ಎಂದು ಇಲಾಖೆ ಎಚ್ಚರಿಸಿದೆ.
ಈ ರೀತಿ ದುರ್ಬಳಕೆ ಮತ್ತು ನಿಯಮ ಉಲ್ಲಂಘನೆ ಮಾಡುವವರಿಗೆ ದೂರಸಂಪರ್ಕ ಕಾಯ್ದೆ, 2023ರ ಅಡಿಯಲ್ಲಿ ಗರಿಷ್ಠ 3 ವರ್ಷಗಳ ಜೈಲು ಶಿಕ್ಷೆ ಮತ್ತು 50 ಲಕ್ಷ ರೂ.ವರೆಗೆ ದಂಡ ವಿಧಿಸಬಹುದಾಗಿದೆ ಎಂದು ಸೆ.21 ರಂದು ಹೊರಡಿಸಿದ ಆದೇಶದಲ್ಲಿ ದೂರ ಸಂಪರ್ಕ ಇಲಾಖೆ ತಿಳಿಸಿದೆ.
ಇದನ್ನೂ ಓದಿ : ಪವರ್ ಕಟ್ ನಡುವೆಯೂ ಕರ್ನಾಟಕದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಳ!





